ಇಡೀ ಜಗತ್ತಿನಾದ್ಯಂತ ಕೊರೊನಾ ವೈರಸ್ ಸೋಂಕಿನ ವ್ಯಾಪ್ತಿ ಹೆಚ್ಚಾಗುತ್ತಲೇ ಇದೆ. ಭಾರತದಲ್ಲೂ ಕೊರೊನಾ ವೈರಸ್ ಸೋಂಕು ತನ್ನ ಪ್ರಭಾವವನ್ನು ದಿನದಿಂದ ದಿನಕ್ಕೆ ಹೆಚ್ಚಿಸಿಕೊಳ್ಳುತ್ತಿದೆ. ಇನ್ನೊಂದೆಡೆ ಕೇಂದ್ರಸರ್ಕಾರ ಭಾರತದಾದ್ಯಂತ ಏಪ್ರಿಲ್ 14ರವರೆಗೆ ಲಾಕ್‌ಡೌನ್ ಘೋಷಿಸಿ ಈ ಕೊರೊನಾ ವೈರಸ್ ವಿರುದ್ಧ ಹೋರಾಟಕ್ಕೆ ಇಳಿದಿದೆ.
ಇಡೀ ದೇಶಕ್ಕೆ ದೇಶವೇ ಸ್ಥಬ್ಧಗೊಂಡ ಈ ಸಂದರ್ಭದಲ್ಲಿ ಕೊರೊನಾ ವೈರಸ್ ಸೋಂಕಿನ ವಿರುದ್ಧದ ಹೋರಾಟಕ್ಕೆ ಸಾಕಷ್ಟು ಆರ್ಥಿಕ ನೆರವಿನ ಅಗತ್ಯವಿದೆ. ಇದರ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕೇಂದ್ರ ಸರ್ಕಾರಕ್ಕೆ ದೊಡ್ಡ ಮೊತ್ತದ ನೆರವನ್ನು ತನ್ನ ಕಡೆಯಿಂದ ಘೋಷಿಸಿದೆ.
ಬಿಸಿಸಿಐ ಪ್ರಧಾನಮಂತ್ರಿ ನಾಗರಿಕ ಸಹಾಯ ಮತ್ತು ತುರ್ತುಪರಿಸ್ಥಿತಿಗಳ ಪರಿಹಾರ ನಿಧಿಗೆ 51 ಕೋಟಿ ರೂಪಾಯಿಗಳ ಪರಿಹಾರ ಮೊತ್ತವನ್ನು ಘೋಷಿಸಿದೆ. ಈ ಮೂಲಕ ವಿಶ್ವದಾದ್ಯಂತ ಶರವೇಗ ವಾಗಿ ಹಬ್ಬುತ್ತಿರುವ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ತನ್ನ ಕೈಜೋಡಿಸಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಹಾಗೂ ಕಾರ್ಯದರ್ಶಿ ಜೈ ಶಾ ಈ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ.
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಬಿಸಿಸಿಐ ತೆಗೆದುಕೊಂಡಿರುವ ಈ ನಿಲುವಿಗೆ ದೇಶದ ಜನರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕ್ರಿಕೆಟ್ ಪ್ರೇಮಿಗಳು ಟ್ವಿಟ್ಟರ್‌ನಲ್ಲಿ ಬಿಸಿಸಿಐನ ನಿರ್ಧಾರಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತಿದ್ದಾರೆ.


0 ಕಾಮೆಂಟ್‌ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.