ಉಡುಪಿ, ಮಾರ್ಚ್ 25: ಮಾರ್ಚ್ 18 ತಾರೀಕಿನಂದು ದುಬೈನಿಂದ ಬಂದಿದ್ದ 34 ವಯಸ್ಸಿನ ವ್ಯಕ್ತಿಯೊಬ್ಬನಿಗೆ ಪ್ರಾಥಮಿಕ ತಪಾಸಣೆಯಲ್ಲಿ ಕೊರೊನಾ ವೈರಸ್ ಸೋಂಕು ಪಾಸಿಟಿವ್ ಪತ್ತೆಯಾಗಿತ್ತು.
ಮಾರ್ಚ್ 23 ತಾರೀಕಿನಂದು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಈ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢವಾಗಿದೆ. ಇದು ಉಡುಪಿ ಜಿಲ್ಲೆಯಲ್ಲಿ ಕಾಣಿಸಿಕೊಂಡ ಮೊದಲ ಪಾಸಿಟಿವ್ ಕೇಸ್ ಇದಾಗಿದೆ.
ಕೊರೊನಾ ವೈರಸ್ ಸೋಂಕು ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಈ ವ್ಯಕ್ತಿಯ ಗಂಟಲಿನ ದ್ರವವನ್ನು ಪರೀಕ್ಷೆ ಗೋಸ್ಕರ ಲ್ಯಾಬ್ ಗೆ ಕಳಿಸಲಾಗಿತ್ತು. ಈ ವ್ಯಕ್ತಿಯ ಪ್ರಾಥಮಿಕ ವರದಿ ಲಭ್ಯವಾಗಿದ್ದು, ಇದೀಗ ಈ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಪಾಸಿಟಿವ್ ಕಂಡುಬಂದಿದೆ ಎಂದು ಉಡುಪಿಯ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುಧೀರ್ ಚಂದ್ರಸೂಡ ಅವರು ಮಾಹಿತಿಯನ್ನು ನೀಡಿದ್ದಾರೆ.
Tags:
ಉಡುಪಿ ಜಿಲ್ಲಾ ಸುದ್ದಿಗಳು