ಮುಂಡಗೋಡ: ರಾಜ್ಯಾದ್ಯಂತ ಕೊರೊನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರಕಾರ ಮಾ.31ರ ವರೆಗೆ ಯಾವುದೇ ಸಭೆ ಸಮಾರಂಭಗಳನ್ನು ನಡೆಸದಂತೆ ಆದೇಶಿಸಿದೆ.
ಕಾರ್ಮಿಕ ಹಾಗೂ ಸಕ್ಕರೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಶನಿವಾರ ಹಾಗೂ ರವಿವಾರ ಸಾರ್ವಜನಿಕರ ಭೇಟಿಗೆ ಹಾಗೂ ಯಾವುದೇ ಸಭೆ ಸಮಾರಂಭಗಳಲ್ಲಿ ಭಾಗವಹಿಸುವುದಿಲ್ಲ ಎಂದು ಮತ್ತು ರವಿವಾರ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿರುವ ಜನತಾ ಕರ್ಫ್ಯೂನಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಭಾಗವಹಿಸಿ ಅತ್ಯಂತ ಅನಿವಾರ್ಯ ಪರಿಸ್ಥಿತಿ ಇದ್ದಲ್ಲಿ ಮಾತ್ರ ಮನೆಯಿಂದ ಹೊರಗಡೆ ಬರಬೇಕು ಎಂದು ಸಾರ್ವಜನಿಕರಲ್ಲಿ ವಿನಂತಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.