ಟ್ವಿಟ್ಟರ್ ನ ಭಾರತ ವಿರೋಧಿ ನೀತಿ ಮತ್ತೊಮ್ಮೆ ಬಯಲಾಗಿದೆ - ಟ್ವಿಟ್ಟರ್ ನ ಮೇಲೆ ಕಿಡಿಕಾರಿದ ಅನಂತ್ ಕುಮಾರ್ ಹೆಗಡೆ

ಟ್ವಿಟ್ಟರ್ ನ ಭಾರತ ವಿರೋಧಿ ನೀತಿ ಮತ್ತೊಮ್ಮೆ ಬಯಲಾಗಿದೆ - ಟ್ವಿಟ್ಟರ್ ನ ಮೇಲೆ ಕಿಡಿಕಾರಿದ ಅನಂತ್ ಕುಮಾರ್ ಹೆಗಡೆ


ಬೆಂಗಳೂರು, ಎಪ್ರಿಲ್ 26: 'ರಾಷ್ಟ್ರ ವಿರೋಧಿ' ಟ್ವೀಟ್ ವಿರುದ್ಧ ದೂರು ನೀಡಿದ ನಂತರ ಮೈಕ್ರೋ ಬ್ಲಾಗಿಂಗ್ ವೆಬ್‌ಸೈಟ್ ತನ್ನ ಟ್ವಿಟ್ಟರ್ ಖಾತೆಯನ್ನು 'ನಿರ್ಬಂಧಿಸಿದೆ' ಎಂದು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತ್‌ಕುಮಾರ್ ಹೆಗ್ಡೆ ಹೇಳಿದ್ದಾರೆ.


ಈ ಬಗ್ಗೆ ಹೆಗ್ಡೆ ತಮ್ಮ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ಬರೆದಿದ್ದಾರೆ. "ಟ್ವಿಟ್ಟರ್ನ ಭಾರತೀಯ ವಿರೋಧಿ ನೀತಿ ಮತ್ತೊಮ್ಮೆ ಬಯಲಾಗಿದೆ. ಟ್ವಿಟರ್ ಭಾರತದ ವಿರುದ್ಧದ ಕಥಾವಸ್ತುವನ್ನು ವಿಭಜಿಸುವ ಮತ್ತು ಹೊರಹಾಕುವ ವ್ಯವಹಾರವನ್ನು ನಡೆಸುತ್ತಿದೆ" ಎಂದು ಅವರು ತಮ್ಮ ಕೋಪವನ್ನು ವ್ಯಕ್ತಪಡಿಸಿದರು.

ಇದಕ್ಕೆ ಪ್ರತ್ಯುತ್ತರವಾಗಿ ಅವರು ತಮ್ಮ ಫೇಸ್ ಬುಕ್ ವಾಲ್ ನಲ್ಲಿ ಈ ರೀತಿಯಾಗಿ ಬರೆದುಕೊಂಡಿದ್ದಾರೆ.


ಟ್ವಿಟ್ಟರ್ ನ ಭಾರತ ವಿರೋಧಿ ನೀತಿ ಮತ್ತೊಮ್ಮೆ ಬಯಲಾಗಿದೆ !!!!

ಭಾರತದ ವಿರುದ್ಧ ಷಡ್ಯಂತರ ಹಾಗೂ  ಭಾರತವನ್ನು ಒಡೆಯುವ ಟ್ವೀಟ್ಗಳನ್ನು ಪ್ರಚಾರಮಾಡುವ ಉದ್ಯಮವನ್ನು ಟ್ವಿಟ್ಟರ್ ಮಾಡುತ್ತಿದೆ.


ಕೆಲವು ದಿನಗಳ ಹಿಂದೆ ಗುರುಪಟವಂತ ಸಿಂಘ್ ಪನ್ನೂನ್ ಎಂಬ ಟ್ವಿಟ್ಟರ್ ಖಾತೆಯಿಂದ ಪಂಜಾಬ್ ರಾಜ್ಯವನ್ನು ಭಾರತದಿಂದ ಸ್ವಾತಂತ್ರಗೊಳಿಸಿ ಖಲಿಸ್ಥಾನ ಎಂಬ ಪ್ರತ್ಯೇಕ ರಾಷ್ಟ್ರವನ್ನಾಗಿಸುವುದರ ಬಗ್ಗೆ  ಟ್ವೀಟ್ ಮಾಡಿದ್ದು ಅದನ್ನು ಟ್ವಿಟ್ಟರಿಗೆ ಹಣಪಾವತಿಸಿ ಜಾಹಿರಾತು ನೀಡಿದ್ದಾರೆ. ಇದು ಭಾರತದ ವಿರುದ್ಧ ನಡೆಸುತ್ತಿರುವ ಜಾಹೀರಾತಾಗಿದ್ದು ಇದನ್ನು ಟ್ವಿಟ್ಟರ್ ಅನುಮೋದಿಸಿ ಜಾಹೀರಾತನ್ನು ಪ್ರಚುರ ಪಡೆಸಿದೆ.  ಇಂತಹ ರಾಷ್ಟ್ರವಿರೋಧ ಚಟುವಟಿಕೆಯನ್ನು ಬಯಲು ಮಾಡಿ, ಸನ್ಮಾನ್ಯ ಪ್ರಧಾನಿ ಹಾಗೂ ಗೃಹ ಸಚಿವರ ಗಮನಕ್ಕೆ ನಾನು ತಂದಿದ್ದರ ಪರಿಣಾಮವಾಗಿ, ಏಪ್ರಿಲ್ 22 ರಂದು ತಬ್ಲೀಘಿ ಜಮಾತ್ ನ ವಿರುದ್ಧ ನಾನು ಮಾಡಿರುವ ಟ್ವೀಟಿನ ನೆಪವಿಟ್ಟುಕೊಂಡು ನನ್ನ ಟ್ವಿಟ್ಟರ್ ಅಕೌಂಟನ್ನು  ರದ್ದುಮಾಡಿದ್ದಾರೆ. ಬದಲಾಗಿ, ನಾನು ಮಾಡಿರುವ ಟ್ವೀಟನ್ನು ತಗೆದುಹಾಕಿದಲ್ಲಿ ನನ್ನ ಅಕೌಂಟ್ ಅನ್ನು ಪುನಃ ಸಕ್ರಿಯಗೊಳಿಸುವುದಾಗಿ ಹೇಳಿದ್ದಾರೆ.


ಮಾನ್ಯರೆ,
ದೇಶದ ವಿರುದ್ಧ ನಡೆಯುವ ಯಾವುದೇ ನಡೆಯನ್ನು ಅದು ಯಾರೇ ಇರಲಿ, ನನ್ನ ವಿರೋಧವನ್ನು ನಾನು ವ್ಯಕ್ತಪಡೆಸುತ್ತಾ ಬಂದಿದ್ದೇನೆ.  ಇದರಲ್ಲಿ ಯಾವುದೇ ರಾಜಿ ಇಲ್ಲಾ. ಈ ನಿಟ್ಟಿನಲ್ಲಿ ನಾನು ಮಾಡಿರುವ ಟ್ವೀಟನ್ನು ನಾನು ಅಳಿಸುವ ಪ್ರಶ್ನೆಯೇ ಇಲ್ಲಾ.


ಅದರಲ್ಲಿ ಟ್ವಿಟ್ಟರ್ ನಡೆಸುತ್ತಿರುವ ಭಾರತ ವಿರೋಧ ಪ್ರಚಾರಗಳನ್ನು ನಾನು ಅತ್ಯಂತ ತೀವ್ರವಾಗಿ ಖಂಡಿಸುತ್ತೇನೆ.

ದೇಶ ವಿರೋಧಿ ಸಮಾಜಿಕ ಜಾಲತಾಣದ ಅಕೌಂಟಿಗಿಂತ ನನ್ನ ದೇಶ, ನನ್ನ ಸಿದ್ಧಾಂತ ನನ್ನ ಜೀವನದ ಆದ್ಯತೆ.

#twitter, #ananthkumarhegde

ಕಾಮೆಂಟ್‌‌ ಪೋಸ್ಟ್‌ ಮಾಡಿ

Don't use abusive language. If any one found to be using abusive language straight away it will be reported to cyber police.

ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.

ನವೀನ ಹಳೆಯದು

Advertisement

Advertisement