ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನಲ್ಲಿ ಚರಂಡಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನು ತೊಳೆದು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬೆಳಗಾವಿಜಿಲ್ಲೆಯ ಬಸವೇಶ್ವರ ಚೌಕ ಠಾಣೆ ಪೊಲೀಸರು ಆ ಇಬ್ಬರು ಯುವಕರನ್ನು ಬಂಧಿಸಿದ್ದಾರೆ.
ನಿಪ್ಪಾಣಿ ತಾಲೂಕಿನ ಭೋಪಳೆ ಗಲ್ಲಿಯ ಶಾಬಾಜ್ ಮುನ್ನಾ ಸತಾರಿ (20) ಹಾಗೂ ರಿಯಾನ್ ಆಯಾಜ್ ಮಡ್ಡೆ (19) ಎಂಬ ಯುವಕರು ಬಂಧಿತರಾಗಿದ್ದಾರೆ. ಈ ಇಬ್ಬರು ಆರೋಪಿಗಳು ಕಲ್ಲಂಗಡಿ ಹಣ್ಣುಗಳನ್ನ ಚರಂಡಿಯ ಕೆಸರು ನೀರಿನಲ್ಲಿ ತೊಳೆದು ಮಾರಾಟ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ನೋಡಿದ ನಿಪ್ಪಾಣಿಯ ಕೆಲವರು ಆರೋಪಿಗಳನ್ನು ಗುರುತಿಸಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಇಬ್ಬರನ್ನೂ ಈಗಾಗಲೇ ಬಂಧಿಸಿದ್ದಾರೆ.
ಇದರ ಸಂಬಂಧವಾಗಿ ಬಸವೇಶ್ವರ ಚೌಕ ಪೊಲೀಸರು ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಂಡು ಈ ಆರೋಪಿಗಳನ್ನು ಈಗಾಗಲೇ ಬಂದಿಸಿ ಹಿಂಡಲಗಾ ಜೈಲಿಗೆ ಅಟ್ಟಿದ್ದಾರೆ.