ಮಂಗಳೂರು, ಮೇ 31: ಮೇ 31 ರ ಭಾನುವಾರ ಮುಂಜಾನೆ ಇಲ್ಲಿನ ಕಲ್ಲಾಪು ಬಳಿ ಸೇತುವೆಯ ಮೇಲೆ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ.
ಮೃತನನ್ನು ಕಾವೂರ್ ನಿವಾಸಿ ಚೇತನ್ ಎಂದು ಗುರುತಿಸಲಾಗಿದೆ. ಬೆಳಿಗ್ಗೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಹಿಂದಿನಿಂದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.
