ಕುಂದಾಪುರ, ಜೂನ್ 2: ಇಲ್ಲಿನ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯೊಂದರಲ್ಲಿ, ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಯೊಬ್ಬಳು ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿರುವುದನ್ನು ಕಂಡು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ವರದಿಯಾಗಿದೆ.
ಆತನ ಈ ಕೃತ್ಯಕ್ಕೆ ಸಾರ್ವಜನಿಕರೆಲ್ಲರೂ ಪೊಲೀಸರಿಗೆ ಒಪ್ಪಿಸುವ ಮೊದಲು ಚೆನ್ನಾಗಿ ಥಳಿಸಿದ್ದಾರೆ. ಆರೋಪಿಯನ್ನು ಬಿಸ್ವಾಸ್ (35) ಎಂದು ಗುರುತಿಸಲಾಗಿದೆ.
ಇಲ್ಲಿನ ಚಿಕ್ಕನ್ಸಲ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಹುಡುಗಿ ತನ್ನ ಕುಟುಂಬದೊಂದಿಗೆ ಅಲ್ಲಿ ಬಾಡಿಗೆ ಮನೆಯಲ್ಲಿರುತ್ತಾಳೆ. ವರದಿಯ ಪ್ರಕಾರ, ಹುಡುಗಿಯ ತಂದೆ ಮತ್ತು ಬಿಸ್ವಾಸ್ ಕಳೆದ 11 ವರ್ಷಗಳಿಂದ ಸ್ನೇಹಿತರಾಗಿದ್ದಾರೆ.
ಜೂನ್ 1 ರ ಸೋಮವಾರ ಬೆಳಿಗ್ಗೆ, ಆ ಹುಡುಗಿ ಒಬ್ಬಂಟಿಯಾಗಿ ರುವುದನ್ನು ಕಂಡು ಅದೇ ಸಮಯವನ್ನು ಬಳಸಿಕೊಂಡು ಈತ ಮನೆಯ ಪಕ್ಕದಲ್ಲಿರುವ ಮರವನ್ನು ಹತ್ತಿ ಹಂಚುಗಳನ್ನು ತೆಗೆದು ಮನೆಯೊಳಗೆ ಪ್ರವೇಶಿಸಿದ್ದಾನೆ.
ಅವನು ಬಾಲಕಿಯನ್ನು ಅತ್ಯಾಚಾರ ಮಾಡಲು ಪ್ರಯತ್ನಿಸಿದಾಗ ಅವಳು ಸಹಾಯಕ್ಕಾಗಿ ಕೂಗಿದಾಗ ಅಲ್ಲಿದ್ದ ಜನರು ಸ್ಥಳಕ್ಕೆ ಧಾವಿಸಿ ಆತನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದರು. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೊಕ್ಸೊ) ಅಡಿಯಲ್ಲಿ ಇಲ್ಲಿನ ಪೊಲೀಸರು ಬಿಸ್ವಾಸ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Tags:
ಉಡುಪಿ ಜಿಲ್ಲಾ ಸುದ್ದಿಗಳು