ಕಾಸರಗೋಡು, ಆಗಸ್ಟ್ 18: ಕಾಸರಗೋಡಿನ ಪೈವಳಿಕೆ ಸಮೀಪ ಬೈಕ್ ಮತ್ತು ಟಿಪ್ಪರ್ ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ನಡೆದಿದ್ದು ಇನ್ನೊಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ.
ಮೃತಪಟ್ಟ ವ್ಯಕ್ತಿಯನ್ನು ಮೇರ್ಕಳದ ಅಬೂಬಕ್ಕರ್ ( 32 ವರ್ಷ) ಎಂದು ಗುರುತಿಸಲಾಗಿದೆ. ಹೇರೂರು ಬಿ.ಸಿ ರೋಡ್ ನ ಮುಹಮ್ಮದ್ ಹನೀಫ್ ಎನ್ನುವವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅತಿ ವೇಗದಿಂದ ಬಂದ ಟಿಪ್ಪರ್ ಲಾರಿ ಇವರಿಬ್ಬರೂ ಸಂಚರಿಸುತ್ತಿದ್ದ ಬೈಕಿಗೆ ರಭಸವಾಗಿ ಡಿಕ್ಕಿ ಹೊಡೆದಿದ್ದು ನಂತರ ಸಾರ್ವಜನಿಕರು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಬ್ಬರಲ್ಲಿ ಒಬ್ಬ ಮೃತ ಪಟ್ಟಿದ್ದು ಇನ್ನೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆಯ ಕುರಿತು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Tags:
ಮಂಗಳೂರು ಜಿಲ್ಲಾ ಸುದ್ದಿಗಳು