ಉತ್ತರ ಪ್ರದೇಶ :ಉತ್ತರಪ್ರದೇಶದಲ್ಲಿ ಸ್ಥಳೀಯ ಬಿಜೆಪಿ ಮುಖಂಡರೊಬ್ಬರ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ. ಬಾಘ್ ಪತ್ ನ ಮಾಜಿ ಜಿಲ್ಲಾಧ್ಯಕ್ಷ ಸಂಜಯ್ ಖೂಖರ್ ರನ್ನು ಮಂಗಳವಾರ ಬೆಳಿಗ್ಗೆ ವಾಕಿಂಗ್ ಮಾಡುವ ವೇಳೆ ಅವರನ್ನು ಗುಂಡೇಟಿನಿಂದ ಹತ್ಯೆ ಮಾಡಲಾಗಿದೆ.
ಈ ಅಮಾನುಷ ಕಾರಿ ಘಟನೆಯು ಮಂಗಳವಾರ ದಿನದಂದು ಬೆಳಿಗ್ಗೆ ಬಾಘ್ ಪತ್ ನ ಚಪ್ರುಲಿ ಪ್ರದೇಶದಲ್ಲಿ ನಡೆದಿದ್ದು, ಹತ್ಯೆಗೆ ಕಾರಣವೇನೆಂಬುದರ ಬಗ್ಗೆ ಯಾವುದೇ ಮಾಹಿತಿ ಇದುವರೆಗೂ ವರದಿಯಾಗಿಲ್ಲ. ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಈಗಾಗಲೇ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ.
ನೆನ್ನೆ ಬೆಳಿಗ್ಗೆ ಮಂಗಳವಾರ ಸಂಜಯ್ ಖೂಖರ್ ತಮ್ಮದೇ ಜಮೀನಿನಲ್ಲಿ ವಾಕಿಂಗ್ ಮಾಡುತ್ತಿರುವ ವೇಳೆ ಗುಂಡಿನ ದಾಳಿ ಮಾಡಲಾಗಿದ್ದು, ರಕ್ತಸಿಕ್ತವಾಗಿ ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಕೂಡ ಬದುಕುಳಿಯಲಿಲ್ಲ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುಂಡಿನ ಏಟಿಗೆ ರಕ್ತದ ಮಡುವಲ್ಲಿ ಒದ್ದಾಡುತ್ತಿದ್ದ ಸಂಜಯ್ ಖೋಖರ್ ಅವರ ಫೋಟೋಗಳು ಮತ್ತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ವೈರಲ್ ಆಗುತ್ತಿದೆ.
