ಸಿದ್ದಾಪುರ: ಸಿದ್ದಾಪುರದಲ್ಲಿ ಹೇಸ್ಕಾಂನಲ್ಲಿ ಮೀಟರ್ ರೀಡರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಜಾಕಿರ್ ಮಿರ್ಜಾ ಗಾಲಿಬ್ (32) ಎನ್ನುವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ಇವರು ಚಿತ್ರದುರ್ಗ ಜಿಲ್ಲೆಯ ಸಜ್ಜನ ಕೆರೆಯ ಮೂಲದವರು ಎಂದು ತಿಳಿದುಬಂದಿದೆ.
ಕಳೆದ ಜೂನ್ 24 ರಂದು ಅವರ ಮಡದಿ ಎರಡನೇ ಸಾರಿ ಗರ್ಭಿಣಿಯಾಗಿದ್ದಾಗ ಮಗು ಮತ್ತು ಗರ್ಭಿಣಿ ಮಾಡಿದ ಇಬ್ಬರು ಸಾವನ್ನಪ್ಪಿದ್ದರು. ಇದರಿಂದಾಗಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
