ಬೆಂಗಳೂರು, ಆಗಸ್ಟ್ 17: ಕರ್ನಾಟಕ ರಾಜ್ಯ ಸರ್ಕಾರವು ಅಧಿಕೃತ ಸುತ್ತೋಲೆಯ ಪ್ರಕಾರ Covid 19 ಕಾರಣದಿಂದಾಗಿ ಪ್ರಸ್ತುತ ಈ ವರ್ಷ ಎಲ್ಲಾ ತರಹದ ನೇಮಕಾತಿಗಳನ್ನು ತಡೆಹಿಡಿಯಲು ಹೇಳಿದ್ದರೂ ಕೂಡ ಕರ್ನಾಟಕ ಲೋಕಸೇವಾ ಆಯೋಗವು ಅಗಸ್ಟ್ 24 ರಂದು 106 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆಗಳನ್ನು ನಡೆಸುತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಇನ್ನು ಶಾಸಕ ದಿನೇಶ್ ಗುಂಡೂರಾವ್ ಮತ್ತು ರಾಜ್ಯಸಭೆ ಸದಸ್ಯ ಜಿ.ಸಿ. ಚಂದ್ರಶೇಖರ್ ಕೂಡ ಸಿದ್ದರಾಮಯ್ಯ ಅವರ ಧ್ವನಿಗೆ ಜೊತೆಯಾಗಿ ಸರ್ಕಾರ ಸುತ್ತೋಲೆಯನ್ನು ಹೊರಡಿಸಿದ್ದರು ಕೂಡ ಕೆಪಿಸಿಸಿ ಪರೀಕ್ಷೆ ಮಾಡುತ್ತಿರುವುದು ಏನಕ್ಕೆ ಎಂದು ಪ್ರಶ್ನೆ ಮಾಡಿದ್ದಾರೆ.
ಈ ಬಗ್ಗೆ ಜಿ.ಸಿ. ಚಂದ್ರಶೇಖರ್ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರವನ್ನು ಬರೆದು ಸದ್ಯದ ಪರಿಸ್ಥಿತಿಯಲ್ಲಿ ಪರೀಕ್ಷೆಗಳನ್ನು ನಡೆಸುವುದರಿಂದ ಸುಮಾರು ಜನ ಪರೀಕ್ಷೆಗಳಿಂದ ವಂಚಿತರಾಗಲಿದ್ದಾರೆ. ಆದ್ದರಿಂದ ಸದ್ಯದ ಮಟ್ಟಿಗೆ ಪರೀಕ್ಷೆಗಳನ್ನು ತಡೆಹಿಡಿದು ಮುಂದಿನ ದಿನಗಳಲ್ಲಿ ಪರೀಕ್ಷೆಗಳನ್ನು ನಡೆಸಬೇಕು ಎಂದು ಮನವಿ ಮಾಡಿದ್ದಾರೆ.