ನವದೆಹಲಿ, ಆಗಸ್ಟ್ 19: ಬಾಲಿವುಡ್ ಉದಯೋನ್ಮುಖ ಪ್ರತಿಭೆ ಹಾಗೂ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದಲ್ಲಿ ನ್ಯಾಯ ಸಿಗಲೇಬೇಕೆಂಬ ಹೋರಾಟ ನಡೆಸಿದವರಿಗೆ ಇದೀಗ ದೊಡ್ಡದೊಂದು ಜಯ ಸಿಕ್ಕಿದಂತಾಗಿದೆ. ಅದೇನೆಂದರೆ ಸುಪ್ರೀಂಕೋರ್ಟ್ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವಂತೆ ಆದೇಶವನ್ನು ನೀಡಿದೆ.
ಈ ಆದೇಶದಿಂದಾಗಿ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ತನಿಖೆಯನ್ನು ನಡೆಸುತ್ತಿದ್ದ ಮುಂಬೈ ಪೊಲೀಸರಿಗೆ ಹಾಗೂ ಸಿಬಿಐ ತನಿಖೆಗೆ ಆಕ್ಷೆಪವನ್ನು ವ್ಯಕ್ತಪಡಿಸುತ್ತಿದ್ದಾರೆ ಸುಶಾಂತ್ ಸಿಂಗ್ ರಜಪೂತ್ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಅವರಿಗೆ ಹಿನ್ನಡೆಯುಂಟಾಗಿದೆ. ರಿಯಾ ಚಕ್ರವರ್ತಿ ವಿರುದ್ಧ ಪಟ್ನಾದ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ FIR ಕೂಡ ಕಾನೂನುಬದ್ಧವಾಗಿದೆ ಎಂದು ಸುಪ್ರೀಂಕೋರ್ಟ್ ಆದೇಶದಲ್ಲಿ ಹೇಳಿದೆ.
ಸುಪ್ರೀಂಕೋರ್ಟ್ನ ಈ ಆದೇಶವನ್ನು ಪರಿಷ್ಕರಿಸುವಂತೆ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಅರ್ಜಿ ಮನವಿಯನ್ನು ಕೂಡ ತಿರಸ್ಕರಿಸಲಾಗಿದೆ. ಸಿಬಿಐ ತನಿಖೆಗೆ ಸ್ವತಃ ಸುಪ್ರೀಂಕೋರ್ಟ್ ಅಸ್ತು ನೀಡಿರುವುದರಿಂದ ಮಹಾರಾಷ್ಟ್ರ ಸರ್ಕಾರ ಸಿಬಿಐಗೆ ತನ್ನ ಸಹಕಾರವನ್ನು ನೀಡಲೇಬೇಕಾಗಿದೆ.