ಎಂಕಾಂ ಕೊನೆಯ ವರ್ಷದ ಕೊನೆಯ ಪರಿಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ನಡೆದಿದೆ.
ವಿವಿಯ ಸ್ನಾತಕೋತ್ತರ ವಿದ್ಯಾರ್ಥಿಯರ ವಸತಿ ನಿಲಯದಲ್ಲಿ ಸುಮಾರು ಅಪರಾಹ್ನದ ವೇಳೆಗೆ ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.
ಇವತ್ತಿಗೆ ಇತ್ತೀಚಿಗಷ್ಟೇ ಮದುವೆಯ ನಿಶ್ಚಿತಾರ್ಥವಾಗಿದ್ದು ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಯುವತಿ ಕಲ್ಬುರ್ಗಿ ಮೂಲದವರಾಗಿದ್ದು ವಸತಿನಿಲಯದ ಕಾಟ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
