ಪಡುಬಿದ್ರಿ, ಸೆಪ್ಟೆಂಬರ್ 03: ಇಲ್ಲಿನ ಹೆಜಮಾಡಿ ಗ್ರಾಮ ಅಯ್ಯಪ್ಪ ನಗರದ ಗರಡಿಯ ಸಮೀಪ ಪಾದಚಾರಿಯೊಬ್ಬರು ಹಿಟ್-ಅಂಡ್-ರನ್ ಪ್ರಕರಣದಲ್ಲಿ ಸಾವನ್ನಪ್ಪಿದ್ದಾರೆ. ಮೃತಪಟ್ಟ ಪಾದಚಾರಿ ಯನ್ನು ಸುರೇಶಗೌಡ ಎಂದು ಗುರುತಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರೇಶಗೌಡ ನಡೆದುಕೊಂಡು ಹೋಗುತ್ತಿದ್ದರು. ಇದೇ ಸಂದರ್ಭದಲ್ಲಿ ಅತಿಯಾದ ವೇಗದಲ್ಲಿ ಬಂದ ಕಾರೊಂದು ಸುರೇಶಗೌಡ ಅವರಿಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ.
ಅಪಘಾತದಲ್ಲಿ ಸುರೇಶಗೌಡ ಅವರ ತಲೆಗೆ ಗಂಭೀರ ಗಾಯವಾಗಿದೆ ತಕ್ಷಣ ಅವರನ್ನು ಮೂಲ್ಕಿಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.