ಸೋಮವಾರ ಸಂಜೆ ದ್ವಿಚಕ್ರ ವಾಹನ ಸವಾರ ನೊಬ್ಬ ಹಿಟ್-ಅಂಡ್-ರನ್ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಮೃತಪಟ್ಟ ವ್ಯಕ್ತಿಯನ್ನು ಬಂಟ್ವಾಳ ಪಲ್ಲಮಜಲು ನಿವಾಸಿ ಪ್ರಕಾಶ್ ಆರ್ ಚೌಟ ಎನ್ನಲಾಗಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನ ಸವಾರನಿಗೆ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿದ್ದು ಪೊಲೀಸರು ಕಾರನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
Tags:
ಮಂಗಳೂರು ಜಿಲ್ಲಾ ಸುದ್ದಿಗಳು