ಕಾಸರಗೋಡು, ಸೆಪ್ಟೆಂಬರ್ 02: ಗರ್ಭಿಣಿ ನರ್ಸೊಬ್ಬಳು ಬಸ್ ನಡಿಗೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಕಣ್ಣೂರಿನ ಪೆರವೂರು ಎಂಬಲ್ಲಿ ಇಂದು ಮಂಗಳವಾರ ಬೆಳಿಗ್ಗೆ ನಡೆದಿದೆ.
ಮೃತರನ್ನು ದಿವ್ಯ ಎಂದು ಗುರುತಿಸಲಾಗಿದೆ. ಇವರು ಕಣ್ಣೂರು ಆಸ್ಟರ್ ಮಿಮ್ಸ್ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯವನ್ನು ನಿರ್ವಹಿಸುತ್ತಿದ್ದರು.
ಕರ್ತವ್ಯದ ನಿಮಿತ್ತ ಆಸ್ಪತ್ರೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ. ಮೃತಪಟ್ಟ ಹೆಂಗಸು ಆರು ತಿಂಗಳ ಗರ್ಭಿಣಿಯಾಗಿದ್ದರು ಎಂದು ಹೇಳಲಾಗಿದೆ.
