ಬೆಳಗಾವಿ: ಗೋಕಾಕ್ ತಾಲೂಕಿನ ಸಂಗನಕೇರಿ ಗ್ರಾಮದ ಬಳಿ ಬೈಕ್, ಟ್ರ್ಯಾಕ್ಟರ್ ಮತ್ತು ಕ್ರೂಜರ್ ಇವುಗಳ ನಡುವೆ ಸರಣಿ ಅಪಘಾತ ಸಂಭವಿಸಿ 5 ತಿಂಗಳ ಮಗು ಸೇರಿದಂತೆ ಮೂವರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಈ ಅಪಘಾತದಲ್ಲಿ ಐದು ತಿಂಗಳ ಮಗು ಸಮೇತ ಗಂಡ-ಹೆಂಡತಿ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಮೃತರು ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದವರು ಅಂತಾ ಹೇಳಲಾಗಿದೆ.