ಸಾಗರ: ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ಕಾರಣ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಾಗರ ತಾಲೂಕಿನ ಭೀಮನ ಕೋಣೆಯ ಹಾರುಡಿಕೆ ಬಳಿಯಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಸಾಗರದ ರತೀಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಈತ ತನ್ನ ಸಂಬಂಧಿಕರ ಮನೆಯಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆಯಲ್ಲಿ ಅಪಘಾತ ನಡೆದಿದೆ ಎನ್ನಲಾಗಿದೆ. ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.