ಮಂಗಳೂರು: ಮಂಗಳೂರು ಹೊರವಲಯದ ಉಳ್ಳಾಲದ ಬಳಿಯಲ್ಲಿ ಕಂಟೇನರ್ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ನವ ದಂಪತಿಗಳಿಬ್ಬರೂ ಮತಪಟ್ಟ ದಾರುಣ ಘಟನೆ ನಡೆದಿದೆ.
ಮೃತರನ್ನು ರಾಯನ್ ಫರ್ನಾಂಡಿಸ್ 1 ಮತ್ತು ಪ್ರಿಯ ಪರ್ನಾಂಡಿಸ್ ಎಂದು ಗುರುತಿಸಲಾಗಿದೆ. ದಂಪತಿಗಳಿಬ್ಬರು ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.
ಹೆಂಡತಿಯನ್ನು ಬೈಕಿನಲ್ಲಿ ಕರೆದುಕೊಂಡು ಹೋಗಲು ಬಂದಿದ್ದ ಪತಿ ಕರೆದುಕೊಂಡು ಹೋಗುತ್ತಿರುವಾಗ ತೊಕ್ಕೊಟ್ಟು ಮೇಲ್ಸೇತುವೆ ಬಳಿ ಕಂಟೇನರ್ ಲಾರಿಯೊಂದು ಬಂದು ಡಿಕ್ಕಿ ಹೊಡೆದಿದೆ. ದಂಪತಿಗಳಿಬ್ಬರಲ್ಲಿ ಪ್ರಿಯ ಪರ್ನಾಂಡಿಸ್ ಸ್ಥಳದಲ್ಲಿಯೇ ಮೃತಪಟ್ಟರೆ ರಾಯನ್ ಫರ್ನಾಂಡಿಸ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯದಲ್ಲಿ ಮತಪಟ್ಟಿದ್ದಾರೆ. ಉಲ್ಲಾಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Tags:
ಮಂಗಳೂರು ಜಿಲ್ಲಾ ಸುದ್ದಿಗಳು