ಕುಮಟಾ ತಾಲೂಕಿನ ಅಂತ್ರವಳ್ಳಿ ಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ತಾಲೂಕಿನ ದಿವಗಿ ಗ್ರಾಮದ ಅಂತ್ರವಳಿ ಸಮೀಪದ ಹೋಂಡದಹಕ್ಕಲದ ನಿವಾಸಿ ಶಶಾಂಕ್ ಅಂಬಿಗ ಹಾಗೂ ಹಣ್ಣೆ ಮಠದ ನಿವಾಸಿ ದಿನೇಶ್ ಪಟಗಾರ ಗಂಭೀರ ಗಾಯಗೊಂಡಿದ್ದಾರೆ.
ಕುಮಟಾ ತಾಲೂಕಿನಿಂದ ಹಾಗೂ ಅಂತ್ರವಳ್ಳಿ ಇಂದ ಕುಮಟಾಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಗಂಭೀರ ಗಾಯವಾಗಿದೆ. ತಕ್ಷಣವೇ ಗಾಯಾಳುಗಳನ್ನು ಕುಮಟಾದ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಯಿತು ಹಾಗೂ ಆನಂದಪುರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ಕುಮಟಾ ಠಾಣೆಯ ಪೊಲೀಸರು ಅಪಘಾತದ ಸ್ಥಳವನ್ನು ಪರಿಶೀಲಿಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.