ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲ ತೀರದ ಮಯೂರ ವೇದಿಕೆಯಲ್ಲಿ ಐದು ದಿನಗಳ ಕಾಲ ನಡೆಯಲಿರುವ ಕರಾವಳಿ ಸಂಗಮೋತ್ಸವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಯನ್ನು ನಡೆಸಲಾಗುತ್ತಿದೆ.
ಕರಾವಳಿ ಸಂಗಮೋತ್ಸವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆಗಿರುವ ಶಿವರಾಮ್ ಹೆಬ್ಬಾರ್ ಅವರು ಉದ್ಘಾಟನೆ ಮಾಡಲಿದ್ದಾರೆ. ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕರು ರೂಪಾಲಿ ಯವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಇನ್ನು ಬಿಜೆಪಿ ಶಾಸಕರುಗಳಾದ ದಿನಕರ್ ಶೆಟ್ಟಿ ಮತ್ತು ಸುನಿಲ್ ನಾಯಕ್ ಹಾಗೂ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಹಿಲನ್ ಮತ್ತು ಅಪರ ಜಿಲ್ಲಾಧಿಕಾರಿಗಳಾದ ಕೃಷ್ಣಮೂರ್ತಿ ಎಚ್ ಕೆ, ಜಿಲ್ಲಾ ಪಂಚಾಯತ್ ಸಿಇಓ ಪ್ರಿಯಾಂಗ ಎಂ ಹಾಗೂ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ್ ಅವರು ಕೂಡ ಭಾಗವಹಿಸಲಿದ್ದಾರೆ.
ಕರಾವಳಿ ಸಂಗಮೋತ್ಸವ ಕಾರ್ಯಕ್ರಮದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮನೋರಂಜನ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಕನ್ನಡದ ಪ್ರಸಿದ್ಧ ರಾಪರ್ ಚಂದನ್ ಶೆಟ್ಟಿ ಹಾಗೂ ಚಿತ್ರನಟ ಯೋಗೇಶ್ ಹಾಗೂ ಅನೇಕ ಚಿತ್ರನಟರು ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕರು ಹೇಳಿದ್ದಾರೆ.