ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 66ರ ಸಮೇತ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಆಗಿದ್ದು ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ.
ಘಟನೆಯ ವಿವರ:
ಯಲ್ಲಾಪುರದಿಂದ ಅಂಕೋಲಕ್ಕೆ ಸಾಗುತ್ತಿದ್ದ ಲಾರಿಯ ಬ್ರೇಕ್ ಫೇಲ್ ಆಗಿತ್ತು. ಇದರಿಂದ ಆತಂಕಗೊಂಡ ಲಾರಿಯ ಕ್ಲೀನರ್ ಮೇಲಿಂದ ಕೆಳಕ್ಕೆ ಜಿಗಿದಿದ್ದಾರೆ. ಜಿಗಿದ ರಭಸಕ್ಕೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮೃತಪಟ್ಟವರನ್ನು ತೆಲಂಗಾಣದ ನಾರಾಯಣಪುರದ ನರೇಂದ್ರ ನಾರಾಯಣ ಎಂದು ಗುರುತಿಸಲಾಗಿದೆ.
ಬ್ರೇಕ್ ಫೇಲ್ ಆದ ಲಾರಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಲಾರಿಗೆ ಗುದ್ದಿದ ಪರಿಣಾಮ ಒಂದು ಲಾರಿ ಪಲ್ಟಿ ಯಾಗಿದೆ. ಅಪಘಾತದ ರಭಸಕ್ಕೆ ಎರಡು ಲಾರಿಗಳು ಜಖಂಗೊಂಡಿದೆ ಹಾಗೂ ಲಾರಿ ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.