ಸಿದ್ದಾಪುರ: ತನ್ನ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಾಡಲು ಹೋಗಿದ್ದ ವಿದ್ಯಾರ್ಥಿಯೊಬ್ಬ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಸಿದ್ದಾಪುರ ತಾಲೂಕಿನ ಕಿಳವಳ್ಳಿ ಯಲ್ಲಿ ನಡೆದಿದೆ.
ವಿದ್ಯಾರ್ಥಿ ಕಿಳವಳ್ಳಿ ಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ ಎಂದು ತಿಳಿದುಬಂದಿದೆ. ಶಾಲೆ ಮುಗಿದ ನಂತರ ತನ್ನ ಸ್ನೇಹಿತರ ಜೊತೆ ಮನೆಯ ಪಕ್ಕದಲ್ಲಿರುವ ಕೆರೆ ಹತ್ತಿರ ಸ್ನಾನ ಮಾಡಲು ಹೋದಾಗ ಆಯತಪ್ಪಿ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾನೆ . ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.