ಕುಮಟಾ: ಕುಮಟಾ ತಾಲೂಕಿನ ಅಲ್ವೇಕೊಡಿ ರಾಷ್ಟ್ರೀಯ ಹೆದ್ದಾರಿ ಹತ್ತಿರ ಸ್ಕೂಟರ್ ಮತ್ತು ಜಿಪ್ ಮಧ್ಯೆ ಡಿಕ್ಕಿಯಾದ ಪರಿಣಾಮ ಸ್ಕೂಟರ್ನಲ್ಲಿ ಸವಾರಿ ಮಾಡುತ್ತಿದ್ದ ಇಬ್ಬರು ವಿದೇಶಿಗರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರದಂದು ನಡೆದಿದೆ.
ಇಬ್ಬರು ವಿದೇಶಿಗರು ಮುರುಡೇಶ್ವರದಲ್ಲಿ ಪ್ರವಾಸವನ್ನು ಮುಗಿಸಿಕೊಂಡು ಗೋಕರ್ಣಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಜೀಪ್ ಕುಮಟಾದಿಂದ ಹೊನ್ನಾವರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಮುಂದಿನಿಂದ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಸ್ಕೂಟರ್ನಲ್ಲಿ ಸವಾರಿ ಮಾಡುತ್ತಿದ್ದ ವಿದೇಶಿಗ ಜೋಡಿಗಳು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣವೇ ಸ್ಥಳೀಯರ ಸಹಕಾರದಿಂದ ಕುಮಟಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆಯನ್ನು ನೀಡಲಾಯಿತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಗೋವಾಕ್ಕೆ ಸಾಗಿಸಲಾಗಿದೆ. ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.