ಯಾವುದೋ ಒಂದು ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಟ್ಕಳ ತಾಲೂಕಿನ ಮಾರುಕೇರಿ ಯ ಕೋಟಖಂಡದಲ್ಲಿ ನಡೆದಿದೆ. ಚಂದ್ರಶೇಖರ ನಾರಾಯಣಭಟ್ ಎನ್ನುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.
ಇವರು ತಮ್ಮ ಮನೆಯ ಕೋಣೆಯಲ್ಲಿ ಬಾಗಿಲನ್ನು ಹಾಕಿಕೊಂಡು ಮನೆಯ ಜಂತಿಗೆ ನೇಣುಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಯಾವುದೇ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಯ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.