ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದ ಸಮೀಪ ಪೂರ್ಣಪ್ರಮಾಣದಲ್ಲಿ ಭರ್ತಿಯಾಗಿರುವ ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾಗಿ ಬಿದ್ದು ಕೆಲಕಾಲ ಆತಂಕವನ್ನು ಸೃಷ್ಟಿಸಿತ್ತು.
ಈ ಗ್ಯಾಸ್ ಟ್ಯಾಂಕರ್ ಚೆನ್ನೈನಿಂದ ಹುಬ್ಬಳ್ಳಿಯ ಮಾರ್ಗವಾಗಿ ಗೋವಾಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುವಿನ ಸ್ಥಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ ಆಗಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಬ್ಯಾಂಕರನ ಚಾಲಕ ಮತ್ತು ನಿರ್ವಾಹಕ ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಈ ಸಂಬಂಧವಾಗಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.