ಹಾವೇರಿ ಜಿಲ್ಲಾ ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರಿನಲ್ಲಿ ಕೋರೋಣ ಸೋಂಕಿತ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಯಲ್ಲಪ್ಪ ಲಮಾಣಿ (70ವರ್ಷ) ರಾಣೆಬೆನ್ನೂರು ತಾಲೂಕಿನ ಗಂಗಾಜಲ ನಿವಾಸಿ ಎಂದು ತಿಳಿದುಬಂದಿದೆ.
ಮೇ ತಿಂಗಳ 3ನೇ ತಾರೀಖಿನಂದು ಇವರು ಅಮೃತಂ ಆಸ್ಪತ್ರೆಗೆ ದಾಖಲಾಗಿದ್ದರು. ಅದರನಂತರ 5ನೇ ತಾರೀಕಿನಂದು ಜಿಲ್ಲಾಸ್ಪತ್ರೆಯ ಕೋವಿಡ್ ಕೇರ್ ಸೆಂಟರಿಗೆ ದಾಖಲಿಸಲಾಗಿತ್ತು. ಅನಾರೋಗ್ಯದ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
Tags:
ಹಾವೇರಿ