ಕುಮಟಾ ತಾಲೂಕಿನ ದುಂಡಕುಳಿ ಬಳಿ ಪಿಡಿಓ ಅಧಿಕಾರಿಯೊಬ್ಬರು ಬೈಕ್ ಸ್ಕಿಡ್ ಆಗಿ ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತಪಟ್ಟ ಅಧಿಕಾರಿಯನ್ನು ಹೊನ್ನಾವರ ತಾಲೂಕಿನ ಇಡಗುಂಜಿಯ ಸಾಲ್ಕೋಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿಡಿಓ ಅಧಿಕಾರಿ ಪ್ರಶಾಂತ ಕೃಷ್ಣ ಶೆಟ್ಟಿ ಎಂದು ಗುರುತಿಸಲಾಗಿದೆ. ತಲೆಗೆ ಗಂಭೀರವಾದ ಏಟು ಬಿದ್ದ ಪರಿಣಾಮ ಮೃತಪಟ್ಟಿದ್ದಾರೆ.
ಜಿಲ್ಲಾ ಕೇಂದ್ರ ಕಾರವಾರದಲ್ಲಿ ನಡೆಯುತ್ತಿದ್ದ ಕಂಪ್ಯೂಟರ್ ಪರೀಕ್ಷೆಗೆ ಹಾಜರಾಗಲು ಹೊನ್ನಾವರದಿಂದ ಕಾರವಾರದ ಕಡೆಗೆ ಬೈಕಿನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.