ಸಾಗರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮೂಲದ ವ್ಯಕ್ತಿ ಯೊರ್ವ ಸಾಗರ-ತಾಳಗುಪ್ಪ ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ತಡರಾತ್ರಿ ಸಾಗರದ ಶಿರವಾಳ ರೈಲ್ವೆ ಗೇಟ್ ಬಳಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಶಿರಸಿ ತಾಲೂಕಿನ ಹುಲೇಕಲ್ ನ ನಾಗರಾಜ್ ಹೆಗಡೆ(31 ವರ್ಷ) ಎಂದು ತಿಳಿದುಬಂದಿದೆ.ಇವರು ಸಾಗರದ ಜೆ.ಎಂ.ಎಫ್ ಸಿ ಯಲ್ಲಿ ಬೆಂಚ್ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಮೃತದೇಹವು ರೈಲಿಗೆ ಸಿಲುಕಿ ಸಂಪೂರ್ಣವಾಗಿ ಚಿದ್ರಗೊಂಡಿದ್ದು ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಈ ಘಟನೆಯ ಕುರಿತು ರೈಲ್ವೆ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.