ಸಿದ್ದಾಪುರ : ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಿದ್ದಾಪುರ ತಾಲೂಕಿನ ಮನ್ಮನೆಯ ಯೋಧ ಗಿರೀಶ್ ಎಸ್ ನಾಯ್ಕ (56) ಎನ್ನುವವರು ಮರಣ ಹೊಂದಿದ್ದಾರೆ.
ಇವರು ಸಿಕಂದರಾಬಾದ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು ಕೆಲವು ದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಕೂಡ ಪಡೆಯುತ್ತಿದ್ದರು.
ಅದರೆ ಚಿಕಿತ್ಸೆ ಫಲಕಾರಿ ಆಗದೆ ಮೃತ ಪಟ್ಟಿದ್ದಾರೆ. ಅವರ ಪಾರ್ಥಿವ ಶರೀರವನ್ನು ಸ್ವಗ್ರಾಮ ಮನೆಗೆ ತರಲಿದ್ದಾರೆ.
ಸಕಲ ಸರಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ಕಾರ್ಯ ನೆರವೇರಿಸಲಾಗುತ್ತದೆ ಎಂದು ಸಂಬಂಧಿಕರು ಮಾಹಿತಿ ನೀಡಿದ್ದಾರೆ.