ಸಾರ್ವಜನಿಕ ಸ್ಥಳಗಳಲ್ಲಿ ಗೊಂದಲ, ಅಶಿಸ್ತಿನ ವರ್ತನೆ, ಶಬ್ದಮಾಲಿನ್ಯ ಹಾಗೂ ಸಂಚಾರ ಅಡಚಣೆ ಉಂಟಾಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಅನುಮತಿ ಇಲ್ಲದೆ ದೊಡ್ಡ ಮಟ್ಟದ ಸಮಾವೇಶ, ಪಟಾಕಿ ಸಿಡಿಸುವುದು, ಹಾಗೂ ರಾತ್ರಿ ತಡವರೆಗೆ ಧ್ವನಿವರ್ಧಕ ಬಳಕೆ ನಿಷೇಧಿತವಾಗಿದೆ. ಸಂಚಾರ ನಿಯಮಗಳ ಉಲ್ಲಂಘನೆಗೆ ಯಾವುದೇ ರೀತಿಯ ಸಡಿಲಿಕೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯುವಜನರು ಹಾಗೂ ಸಾರ್ವಜನಿಕರು ಸಂಭ್ರಮದ ಜೊತೆಗೆ ಜವಾಬ್ದಾರಿಯುತ ವರ್ತನೆ ತೋರಬೇಕು ಎಂದು ಸಲಹೆ ನೀಡಲಾಗಿದೆ. ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್, ಆರೋಗ್ಯ ಹಾಗೂ ಅಗ್ನಿಶಾಮಕ ಸೇವೆಗಳ ಸಹಾಯ ಪಡೆಯಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ.
ಹೊಸ ವರ್ಷವನ್ನು ಶಾಂತಿ, ಸೌಹಾರ್ದ ಮತ್ತು ಭದ್ರತೆಯೊಂದಿಗೆ ಸ್ವಾಗತಿಸುವುದೇ ಆಡಳಿತದ ಉದ್ದೇಶವಾಗಿದೆ. ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸಿ, ಎಲ್ಲರೂ ಸುರಕ್ಷಿತವಾಗಿ ಹೊಸ ವರ್ಷವನ್ನು ಆಚರಿಸೋಣ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.
0 ಕಾಮೆಂಟ್‌ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.