Ticker

6/recent/ticker-posts
Responsive Advertisement

Uttarakannda :ಕುಮಟಾ ಸಮೀಪ ಯಾಣ ಬಳಿ ಕಾಲೇಜು ವಿದ್ಯಾರ್ಥಿಗಳ ಬಸ್ ಪಲ್ಟಿ: 12 ವಿದ್ಯಾರ್ಥಿಗಳಿಗೆ ಗಾಯ


ಕುಮಟಾ, ಡಿ. 30:
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಾಣ ಸಮೀಪ ಕಾಲೇಜು ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಬಸ್‌ ಒಂದು ಪಲ್ಟಿಯಾದ ಘಟನೆ ನಡೆದಿದೆ. ಶಿರಸಿಯಿಂದ ಯಾಣದತ್ತ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಈ ಬಸ್ಸಿನಲ್ಲಿ ದಾವಣಗೆರೆಯ ಜೈನ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಒಟ್ಟು 20 ವಿದ್ಯಾರ್ಥಿನಿಯರು, 27 ವಿದ್ಯಾರ್ಥಿಗಳು ಹಾಗೂ ಮೂವರು ಶಿಕ್ಷಕರು ಬಸ್ಸಿನಲ್ಲಿದ್ದರು ಎನ್ನಲಾಗಿದೆ. ಅಪಘಾತದಲ್ಲಿ ಸುಮಾರು 12 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಅಪಾಯದಿಂದ ಪಾರಾಗಿರುವುದು ನಿಟ್ಟುಸಿರು ಬಿಡುವಂತಾಗಿದೆ.

ಮಾಹಿತಿಯಂತೆ, ವಿದ್ಯಾರ್ಥಿಗಳು ಶಿರಸಿಯ ಮಾರಿಕಾಂಬಾ ದೇವಿಯ ದರ್ಶನ ಪಡೆದ ಬಳಿಕ ಯಾಣಕ್ಕೆ ತೆರಳುತ್ತಿದ್ದರು. ಈ ಸಂದರ್ಭ ರಸ್ತೆಯ ತಿರುವಿನಲ್ಲಿ ಬಸ್ ಪಲ್ಟಿಯಾಗಿದೆ ಎಂದು ಹೇಳಲಾಗುತ್ತಿದೆ. ಘಟನೆ ಸಂಬಂಧ ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು