ಶಿಕ್ಷಕರು ಹೆಚ್ಚು ಪಠ್ಯಪುಸ್ತಕಗಳನ್ನು ತರಲು ಸೂಚನೆ ನೀಡಿದ್ದರಿಂದ, ವಿದ್ಯಾರ್ಥಿ ಅಗತ್ಯಕ್ಕಿಂತ ಹೆಚ್ಚಿನ ಪುಸ್ತಕಗಳನ್ನು ಬ್ಯಾಗ್‌ನಲ್ಲಿ ತುಂಬಿಕೊಂಡು ಶಾಲೆಗೆ ಹೋಗಿದ್ದಾನೆ. ದೀರ್ಘ ಸಮಯ ಭಾರವಾದ ಬ್ಯಾಗ್ ಹೊತ್ತುಕೊಂಡಿದ್ದ ಪರಿಣಾಮ ಅವನ ಬಲಗೈ ಭುಜ ಭಾಗದಲ್ಲಿ ತೀವ್ರ ನೋವು ಮತ್ತು ಊತ ಉಂಟಾಗಿದೆ.
ಶಾಲೆಯಿಂದ ಮನೆಗೆ ಮರಳಿದ ಬಳಿಕ ಕುಟುಂಬದವರು ಆಸ್ಪತ್ರೆಗೆ ಕರೆದೊಯ್ಯಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಕೈ ಮುರಿತ ದೃಢಪಟ್ಟಿದೆ. ಈ ಘಟನೆ ಭಾರವಾದ ಶಾಲಾ ಬ್ಯಾಗ್‌ಗಳು ಮಕ್ಕಳ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ.
0 ಕಾಮೆಂಟ್‌ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.