Ticker

6/recent/ticker-posts
Responsive Advertisement

Malpe: ಮಲ್ಪೆ: ವಾಟರ್ ಸ್ಪೋರ್ಟ್ಸ್ ಮತ್ತು ಪ್ರವಾಸಿ ದೋಣಿ ಮಾಲಕರಿಗೆ ಕಟ್ಟುನಿಟ್ಟಿನ ಸೂಚನೆಗಳು

ಮಲ್ಪೆ ಸಿಎಸ್‌ಪಿ ಠಾಣೆಯಲ್ಲಿ ಮಾನ್ಯ ಡಿವೈಎಸ್‌ಪಿ (CSP) ಅವರ ಅಧ್ಯಕ್ಷತೆಯಲ್ಲಿ, ಠಾಣಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಟರ್ ಸ್ಪೋರ್ಟ್ಸ್ ಮತ್ತು ಪ್ರವಾಸಿ ದೋಣಿ ಮಾಲಕರ ಸಭೆ ನಡೆಯಿತು. ಸಭೆಯಲ್ಲಿ 40ಕ್ಕೂ ಹೆಚ್ಚು ಬೋಟ್ ಮಾಲಕರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ, ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇತ್ತೀಚೆಗೆ ನಡೆಸಿದ ಸಭೆಯಲ್ಲಿನ ಸೂಚನೆಗಳು ಮತ್ತು ಮಾರ್ಗಸೂಚಿಗಳನ್ನು ಬೋಟ್ ಮಾಲಕರಿಗೆ ವಿವರವಾಗಿ ತಿಳಿಸಲಾಯಿತು. 

ಮುಂದಿನ ದಿನಗಳಲ್ಲಿ ಬೋಟ್‌ಗಳು, ಕಯಾಕಿಂಗ್ ಸೇರಿದಂತೆ ಇತರ ಎಲ್ಲಾ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳನ್ನು ನಡೆಸುವವರು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸರಿಯಾಗಿ ಹೊಂದಿಕೊಂಡು ಮಾತ್ರ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು.

ಪ್ರವಾಸಿಗರ ಸುರಕ್ಷತೆ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಬೋಟ್ ಮಾಲಕರಿಗೆ ಸೂಚನೆ ನೀಡಲಾಯಿತು. 

ಯಾವುದೇ ರೀತಿಯ ಅಕ್ರಮ ಅಥವಾ ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಸಭೆಯ ಅಂತ್ಯದಲ್ಲಿ, ಸುರಕ್ಷಿತ ಪ್ರವಾಸೋದ್ಯಮಕ್ಕೆ ಸಹಕಾರ ನೀಡುವಂತೆ ಹಾಗೂ ಜವಾಬ್ದಾರಿಯುತವಾಗಿ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳನ್ನು ನಡೆಸುವಂತೆ ಬೋಟ್ ಮಾಲಕರಿಗೆ ಮನವಿ ಮಾಡಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು