ಕಷ್ಟಕಾಲದಲ್ಲಿ ಭದ್ರ ಆಸ್ತಿಯೆಂದು ಪರಿಗಣಿಸಲ್ಪಡುವ ‘ಹಳದಿ ಲೋಹ’ ಕಳೆದ ಒಂದು ವರ್ಷದಲ್ಲಿ ಸುಮಾರು 93 ಶೇಕಡಾ ಏರಿಕೆಯಾಗಿರುವುದು ಬಂಗಾರ ಪ್ರಿಯರಲ್ಲಿ ಆತಂಕ ಮೂಡಿಸಿದೆ. ಜಾಗತಿಕ ಆರ್ಥಿಕ ಅನಿಶ್ಚಿತತೆ, ಮೌಲ್ಯವರ್ಧನೆ ಭೀತಿ ಹಾಗೂ ಹೂಡಿಕೆದಾರರ ಬೇಡಿಕೆ ಹೆಚ್ಚಳವೇ ಈ ಬೆಲೆ ಏರಿಕೆಗೆ ಪ್ರಮುಖ ಕಾರಣಗಳಾಗಿವೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನಷ್ಟು ಏರಿಕೆಯಾಗಬಹುದೆಂಬ ಅಂದಾಜಿನಿಂದ ಕೆಲವರು ಆತುರವಾಗಿ ಚಿನ್ನ ಖರೀದಿಗೆ ಮುಂದಾಗುತ್ತಿದ್ದಾರೆ. ಆದರೆ, ಈ ಸಮಯದಲ್ಲಿ ಅತಿಯಾದ ಉತ್ಸಾಹದಿಂದ ಚಿನ್ನ ಖರೀದಿಸುವುದು ಸೂಕ್ತವಲ್ಲ ಎಂದು ಆರ್ಥಿಕ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಅವರ ಪ್ರಕಾರ, ನಿರಂತರ ಏರಿಕೆಯ ಬಳಿಕ ಚಿನ್ನದ ಬೆಲೆ ಒಂದು ಹಂತದಲ್ಲಿ ತಿದ್ದುಪಡಿ ಕಾಣುವ ಸಾಧ್ಯತೆ ಇದ್ದು, ಮುಂದಿನ ದಿನಗಳಲ್ಲಿ ದರ ಇಳಿಕೆಯಾಗುವ ಸಾಧ್ಯತೆಯನ್ನೂ ತಳ್ಳಿ ಹಾಕಲಾಗುವುದಿಲ್ಲ.
ಆದ್ದರಿಂದ, ಚಿನ್ನ ಅಥವಾ ಬೆಳ್ಳಿಯಲ್ಲಿ ಹೂಡಿಕೆ ಮಾಡುವ ಮುನ್ನ ಮಾರುಕಟ್ಟೆಯ ಸ್ಥಿತಿಗತಿಯನ್ನು ಸಮಗ್ರವಾಗಿ ಅವಲೋಕಿಸಿ, ತಜ್ಞರ ಸಲಹೆ ಪಡೆದು ನಿರ್ಧಾರ ಕೈಗೊಳ್ಳುವುದು ಒಳಿತು ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.
0 ಕಾಮೆಂಟ್‌ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.