ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ–66ರ ಮಾನೀರು ದೇವಸ್ಥಾನದ ಸಮೀಪ ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೊಲೆರೋ ವಾಹನ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಬೊಲೆರೋ ವಾಹನದ ಚಾಲಕ ಕಾರವಾರ ನಿವಾಸಿ ಡೇವಿಡ್ ಪಾಸ್ಕಲ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್‌ನಲ್ಲಿದ್ದ ಏಳು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೀನು ಸಾಗಣೆಗಾಗಿ ಕಾರವಾರದಿಂದ ಕುಮಟಾಗೆ ತೆರಳಿದ್ದ ಬೊಲೆರೋ ವಾಹನ, ಮರಳುವ ವೇಳೆ ಗೋಕರ್ಣದ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
ಘಟನೆಯ ಮಾಹಿತಿ ಪಡೆದ ಕುಮಟಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣಗಳ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
0 ಕಾಮೆಂಟ್‌ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.