Ticker

6/recent/ticker-posts
Responsive Advertisement

ಕಾರವಾರಕ್ಕೆ ದೊಡ್ಡ ಆರೋಗ್ಯ ಸೌಲಭ್ಯ: 450 ಹಾಸಿಗೆಗಳ ಆಸ್ಪತ್ರೆ ಉದ್ಘಾಟನೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಭರವಸೆ

ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಸೇವೆಗಳನ್ನು ಬಲಪಡಿಸುವ ಉದ್ದೇಶದಿಂದ ವಿಜಯಪುರ ಸೇರಿದಂತೆ ಮೂರು ಜಿಲ್ಲೆಗಳಲ್ಲಿ ಹೊಸ ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜೊತೆಗೆ, ಮುಂದಿನ ರಾಜ್ಯ ಆಯವ್ಯಯದಲ್ಲಿ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವುದಾಗಿ ಭರವಸೆ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಯೋಗದಲ್ಲಿ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸಲಾದ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಬಡಜನರಿಗೆ ಉತ್ತಮ ಆರೋಗ್ಯ ಸೇವೆ ಲಭ್ಯವಾಗುವಂತೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಸಿಎಂ ಹೇಳಿದರು. ಕಾರವಾರದಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕವನ್ನು ಕೂಡ ಸ್ಥಾಪಿಸುವ ಯೋಜನೆ ಇದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರಗಳಲ್ಲಿಯೇ ಎಲ್ಲಾ ಪ್ರಮುಖ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ. ಕರ್ನಾಟಕದಲ್ಲಿ ಈಗಾಗಲೇ 22 ಸರ್ಕಾರಿ ಮೆಡಿಕಲ್ ಕಾಲೇಜುಗಳು ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಕೋಲಾರ, ಪುತ್ತೂರು ಮತ್ತು ವಿಜಯಪುರ ಪ್ರದೇಶಗಳಲ್ಲಿ ಹೊಸ ಮೆಡಿಕಲ್ ಕಾಲೇಜುಗಳನ್ನು ನಿರ್ಮಿಸುವ ಯೋಜನೆ ಇದೆ ಎಂದು ತಿಳಿಸಿದರು.

ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸುವ ಉದ್ದೇಶದಿಂದ ಹಿಂದಿನ ಅವಧಿಯಲ್ಲೇ ಈ ಯೋಜನೆ ಆರಂಭಿಸಲಾಗಿದ್ದು, ಸುಮಾರು 200 ಕೋಟಿ ರೂ. ವೆಚ್ಚದಲ್ಲಿ ಕಾರವಾರದಲ್ಲಿ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಗೊಂಡಿದೆ. ಈ ಹಿಂದೆ ಉನ್ನತ ಚಿಕಿತ್ಸೆಗೆ ಉಡುಪಿ, ಮಂಗಳೂರು ಹಾಗೂ ಹುಬ್ಬಳ್ಳಿ ನಗರಗಳಿಗೆ ತೆರಳಬೇಕಾಗಿದ್ದ ಜನರಿಗೆ ಇದೀಗ ಸ್ಥಳೀಯ ಮಟ್ಟದಲ್ಲೇ ಉತ್ತಮ ಚಿಕಿತ್ಸೆ ಲಭ್ಯವಾಗಲಿದೆ.

ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಪುನರುಚ್ಚರಿಸಿ ಭರವಸೆ ನೀಡಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು