Ticker

6/recent/ticker-posts
Responsive Advertisement

Bhatkal: ಭಟ್ಕಳ: 21 ಕೆಜಿ ಜಿಂಕೆ ಮಾಂಸ, ಏರ್‌ಗನ್ ಪತ್ತೆ — ಅರಣ್ಯ ಇಲಾಖೆಯ ಕ್ರಮ

ಭಟ್ಕಳ: ಕಾಡು ಪ್ರಾಣಿಗಳ ಹತ್ಯೆ ಶಂಕೆಯ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಭಟ್ಕಳ ತಾಲೂಕಿನ ಹುರುಳಿಸಾಲದಲ್ಲಿರುವ ಮನೆ ಒಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಸುಮಾರು 21 ಕೆಜಿ ಜಿಂಕೆ ಮಾಂಸ, ಜಿಂಕೆಯ ಕೊಬ್ಬು ಮತ್ತು ಎರಡು ಏರ್‌ಗನ್‌ಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಜಾಫರ್ ಬ್ರಹ್ಮವರ್ ಎಂಬಾತ ಕಾಡಿನಲ್ಲಿ ಪ್ರಾಣಿಯನ್ನು ಹತ್ಯೆ ಮಾಡಿ, ಮಾಂಸವನ್ನು ಮನೆಯ ಪಕ್ಕದಲ್ಲೇ ಬೇರ್ಪಡಿಸಿದ್ದಾನೆ ಎನ್ನಲಾಗಿದೆ. ಪ್ರಾಣಿಯ ಉಳಿದ ಅವಶೇಷಗಳನ್ನು ಪಾಳುಬಿದ್ದ ಬಾವಿಗೆ ಎಸೆದಿರುವ ಶಂಕೆಯೂ ವ್ಯಕ್ತವಾಗಿದೆ.

ದಾಳಿ ವೇಳೆ ಅಧಿಕಾರಿಗಳು ಬಾವಿಯಲ್ಲಿದ್ದ ಅವಶೇಷಗಳನ್ನು ಹೊರತೆಗೆದು ಪರಿಶೀಲನೆ ನಡೆಸಿದರು. ಬಳಿಕ ಮನೆ ಒಳಗೆ ಶೋಧ ಕಾರ್ಯ ಮುಂದುವರಿಸಲಾಯಿತು. ಆರಂಭದಲ್ಲಿ ಮನೆಯವರು ಬಾಗಿಲು ತೆರೆದು ಸಹಕರಿಸದೇ ವಿರೋಧ ವ್ಯಕ್ತಪಡಿಸಿದ್ದರೆಂದು ತಿಳಿದುಬಂದಿದೆ.

ಘಟನೆ ಸಂಬಂಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು