ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದ ಕಾರಣ ಕಡಲಾಮೆ ಕಾಂಡ್ಲೆ ಸಸಿಗಳ ನಡುವೆ ಸಿಲುಕಿ ಚಲಿಸಲು ಅಸಾಧ್ಯವಾದ ಪರಿಸ್ಥಿತಿ ಉಂಟಾಗಿತ್ತು. ಸ್ಥಳೀಯ ಮೀನುಗಾರರು ಇದನ್ನು ಗಮನಿಸಿ ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಮಾಹಿತಿ ಪಡೆದ ಅರಣ್ಯ ಇಲಾಖೆ ಹಾಗೂ ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಕಡಲಾಮೆಯನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿತು. ಪ್ರಾಥಮಿಕ ಪರಿಶೀಲನೆ ವೇಳೆ ಕಡಲಾಮೆ ನಿತ್ರಾಣಗೊಂಡಿರುವುದು ಕಂಡುಬಂದಿದ್ದು, ಅಗತ್ಯ ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಯಿತು.
ತಜ್ಞರ ಪ್ರಕಾರ ಹಸಿರು ಕಡಲಾಮೆಗಳು ಈ ಭಾಗದಲ್ಲಿ ಕಾಣಿಸಿಕೊಳ್ಳುವುದು ಅಪರೂಪ. ಸಮುದ್ರದ ಅಲೆಗಳ ಪರಿಣಾಮವಾಗಿ ನದಿಯೊಳಗೆ ಪ್ರವೇಶಿಸಿದ ನಂತರ ಮರಳಿ ಸಾಗಲು ಸಾಧ್ಯವಾಗದೆ ಸಿಲುಕಿರುವ ಸಾಧ್ಯತೆ ಇದೆ. ಚಿಕಿತ್ಸೆ ಬಳಿಕ ಕಡಲಾಮೆಯನ್ನು ಸಮುದ್ರಕ್ಕೆ ಬಿಡುವ ನಿರೀಕ್ಷೆಯಿದೆ.
0 ಕಾಮೆಂಟ್‌ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.