Ticker

6/recent/ticker-posts
Responsive Advertisement

Uttarakannda: ಮುರುಡೇಶ್ವರ ಕಲ್ಲುತೂರಾಟ:ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕರು ಗಾಂಜಾ ಸೇವನೆ ದೃಢ

ಕಾರವಾರ ಜಿಲ್ಲೆಯ ಮುರುಡೇಶ್ವರದಲ್ಲಿ ಮನೆಗಳ ಮೇಲೆ ಕಲ್ಲು ತೂರಾಟ ನಡೆದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಏಳು ಅಪ್ರಾಪ್ತ ಬಾಲಕರಿಗೆ ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಂಧಿತ ಬಾಲಕರನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಮದ್ಯವಸ್ತು ಸೇವನೆಯ ಲಕ್ಷಣಗಳು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅಪ್ರಾಪ್ತರಿಗೆ ಬೈಕ್ ನೀಡಿದ ಪೋಷಕರ ವಿರುದ್ಧವೂ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸೋಮವಾರ ರಾತ್ರಿ ಮುರುಡೇಶ್ವರದ ಬೈಲೂರು ಭಾಗದಲ್ಲಿ ಘಟನೆ ನಡೆದಿದ್ದು, ಮೂರು ಬೈಕ್‌ಗಳಲ್ಲಿ ಬಂದ ಬಾಲಕರ ತಂಡ ತೆಂಗಾರ್ ರಸ್ತೆಯ ಅಕ್ಕಪಕ್ಕದಲ್ಲಿರುವ ಕೆಲವು ಮನೆಗಳತ್ತ ಕಲ್ಲು ತೂರಾಟ ನಡೆಸಿದರೆಂದು ತಿಳಿದುಬಂದಿದೆ. ಸ್ಥಳದಲ್ಲಿದ್ದ ಯುವಕರು ಇಬ್ಬರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ನಂತರ ಉಳಿದವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆ ಬಳಿಕ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಪೊಲೀಸ್ ಠಾಣೆಗೆ ಭೇಟಿ ನೀಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪ್ರಕರಣದ ಹಿನ್ನಲೆ ಹಾಗೂ ಉದ್ದೇಶ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು