ಹಣ ಬಿಡುಗಡೆ ವಿಳಂಬ ಮತ್ತು ತಾಂತ್ರಿಕ ಸಮಸ್ಯೆಗಳ ಬಗ್ಗೆ ಈ ಯೋಜನೆ ಹಿಂದೆಂದೇ ಚರ್ಚೆಗೆ ಕಾರಣವಾಗಿತ್ತು. ಇದೀಗ ಬೀದರ್ ಜಿಲ್ಲೆಯಲ್ಲಿ ಅಧಿಕಾರಿಗಳ ದಾಖಲೆ ನವೀಕರಣದ ಕೊರತೆಯಿಂದ ಮೃತರಾದ 5,327 ಫಲಾನುಭವಿಗಳ ಖಾತೆಗಳಿಗೆ ಸುಮಾರು ₹12 ಕೋಟಿ ಹಣ ಜಮೆಯಾಗಿದೆ ಎಂಬ ಮಾಹಿತಿ ಹೊರಬಂದಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಹಿತಿಯ ಪ್ರಕಾರ, ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿತ ಕೆಲ ಫಲಾನುಭವಿಗಳು ಮೃತಪಟ್ಟಿದ್ದರೂ ಅವರ ವಿವರಗಳು ವ್ಯವಸ್ಥೆಯಲ್ಲಿ ಸಮಯಕ್ಕೆ ಸರಿಯಾಗಿ ನವೀಕರಿಸಲಾಗಿಲ್ಲ. ಇದರಿಂದಾಗಿ ಒಟ್ಟು 59,954 ಕಂತುಗಳು ಮೃತ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು, ಪ್ರತಿ ತಿಂಗಳು ₹2,000ರಂತೆ ಸುಮಾರು ₹12 ಕೋಟಿ ಹಣ ಜಮೆಯಾಗಿದೆ ಎಂದು ತಿಳಿದುಬಂದಿದೆ. ಇದೇ ಕ್ರಮ ಮುಂದುವರೆದಿದ್ದರೆ ಈ ಮೊತ್ತವು ಸುಮಾರು ₹31.96 ಕೋಟಿವರೆಗೆ ತಲುಪುವ ಸಾಧ್ಯತೆ ಇತ್ತು ಎಂದು ಅಂದಾಜಿಸಲಾಗಿದೆ.
ಈ ವಿಷಯ ಬೆಳಕಿಗೆ ಬಂದ ನಂತರ ಸಂಬಂಧಿತ ಇಲಾಖೆಗಳು ಎಚ್ಚೆತ್ತುಕೊಂಡಿದ್ದು, ಮೃತ ಫಲಾನುಭವಿಗಳ ಖಾತೆಗಳಿಗೆ ಜಮೆಯಾದ ಹಣವನ್ನು ವಾಪಸ್ ಪಡೆಯುವ ಹಾಗೂ ದಾಖಲೆಗಳನ್ನು ಸರಿಪಡಿಸುವ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿವೆ ಎಂದು ತಿಳಿದುಬಂದಿದೆ. ಯೋಜನೆಯ ಲಾಭ ನಿಜವಾದ ಅರ್ಹ ಮಹಿಳೆಯರಿಗೆ ತಲುಪುವಂತೆ ವ್ಯವಸ್ಥೆಯನ್ನು ಇನ್ನಷ್ಟು ಪಾರದರ್ಶಕಗೊಳಿಸುವ ಅಗತ್ಯವಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.
0 ಕಾಮೆಂಟ್‌ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.