ದುಬ್ಬನಸಶಿ, ನಡುಮಸ್ಕೇರಿ ಸೇರಿದಂತೆ ಅರಬ್ಬಿ ಸಮುದ್ರ ತೀರದ ಭಾಗಗಳಲ್ಲಿ ಈ ರೆಸಾರ್ಟ್‌ಗಳು ನಿರ್ಮಾಣಗೊಂಡಿರುವುದು ಪರಿಶೀಲನೆಯಲ್ಲಿ ಬೆಳಕಿಗೆ ಬಂದಿದೆ. ಕರಾವಳಿ ನಿಯಂತ್ರಣ ವಲಯ ನಿಯಮಗಳನ್ನು ಪಾಲಿಸದೆ ನಿರ್ಮಾಣ ಮಾಡಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ಆದರೆ ಈ 44 ರೆಸಾರ್ಟ್‌ಗಳ ಪೈಕಿ 16 ರೆಸಾರ್ಟ್‌ಗಳ ಮಾಲೀಕರು ಹೈಕೋರ್ಟ್‌ನಿಂದ ತಡೆಯಾಜ್ಞೆ ಪಡೆದಿರುವ ಕಾರಣ, ಅವುಗಳ ವಿರುದ್ಧ ತಕ್ಷಣದ ತೆರವು ಕ್ರಮ ಕೈಗೊಳ್ಳಲು ಸಾಧ್ಯವಾಗಿಲ್ಲ. ಉಳಿದ 28 ರೆಸಾರ್ಟ್‌ಗಳ ಪೈಕಿ 7 ರೆಸಾರ್ಟ್‌ಗಳನ್ನು ಮಾಲೀಕರು ಸ್ವಯಂಪ್ರೇರಿತವಾಗಿ ತೆರವುಗೊಳಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇನ್ನೂ ಉಳಿದಿರುವ 21 ರೆಸಾರ್ಟ್‌ಗಳನ್ನು ತಾಲೂಕು ಆಡಳಿತ ಸೀಜ್ ಮಾಡಿ, ನಿಯಮಾನುಸಾರವಾಗಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ವೇಳೆ ತೆರವು ಕಾರ್ಯಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಭಾರತೀಯ ನ್ಯಾಯ ಸಂಹಿತೆ (BNS) 163ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ದುಬ್ಬನಸಶಿ, ಗಂಗೆಕೊಳ್ಳ ಹಾಗೂ ಭಾವಿಕೊಡ್ಲ ಗ್ರಾಮಗಳಲ್ಲಿ ಮಾರ್ಚ್ 9ರ ಬೆಳಗ್ಗೆ 10 ಗಂಟೆಯಿಂದ ಮುಂದಿನ ದಿನ ಬೆಳಗ್ಗೆ 10 ಗಂಟೆಯವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
ಈ ಕುರಿತು ಕುಮಟಾ ಸಹಾಯಕ ಆಯುಕ್ತ ಶ್ರವಣಕುಮಾರ ಅವರು ಆದೇಶ ಹೊರಡಿಸಿದ್ದಾರೆ. ಕರಾವಳಿ ಪ್ರದೇಶದಲ್ಲಿ ಪರಿಸರ ಸಂರಕ್ಷಣೆ ಹಾಗೂ ಕಾನೂನು ಪಾಲನೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಆಡಳಿತ ವಲಯ ಸ್ಪಷ್ಟಪಡಿಸಿದೆ.
0 ಕಾಮೆಂಟ್‌ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.