ಕರಾವಳಿ ಕರ್ನಾಟಕದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ನಡೆದರೆ ನೇರ ಹಾಗೂ ಪರೋಕ್ಷವಾಗಿ ಉದ್ಯೋಗಾವಕಾಶಗಳು ಹೆಚ್ಚಾಗುವ ಸಾಧ್ಯತೆ ಇದೆ. ಜೊತೆಗೆ ಸ್ಥಳೀಯರ ಆದಾಯ ಹೆಚ್ಚಾಗಿ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೂ ಉತ್ತೇಜನ ಸಿಗಬಹುದು. ಆದರೆ ಹೊಸ ಉದ್ಯಮಗಳು ಮತ್ತು ಪ್ರವಾಸೋದ್ಯಮ ಯೋಜನೆಗಳನ್ನು ಆರಂಭಿಸಲು ಸಿಆರ್‌ಝೆಡ್ ನಿಯಮಗಳು ಕೆಲವೊಮ್ಮೆ ಅಡ್ಡಿಯಾಗುತ್ತಿವೆ ಎಂದು ಹೇಳಲಾಗುತ್ತಿದೆ.
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಟ್ಟು 92 ಬೀಚ್‌ಗಳನ್ನು ಪ್ರವಾಸೋದ್ಯಮ ಅಭಿವೃದ್ಧಿಗೆ ಗುರುತಿಸಲಾಗಿದೆ. ಅನುಮೋದಿತ ಕರಾವಳಿ ವಲಯ ಮಾಸ್ಟರ್ ಪ್ಲ್ಯಾನ್‌ನಲ್ಲಿ ಈ ಬೀಚ್‌ಗಳನ್ನು ಸೇರಿಸಿ ಪ್ರಮುಖ ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸುವ ಅವಕಾಶ ಇರುವುದಾಗಿ ತಿಳಿದುಬಂದಿದೆ.
0 ಕಾಮೆಂಟ್‌ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.