ಪಾದಚಾರಿ ಮಾರ್ಗಗಳು ಹಾಗೂ ಪಾರ್ಕಿಂಗ್ ಸ್ಥಳಗಳು ಕೂಡ ಗೂಡಂಗಡಿಗಳಿಂದ ಆವರಿಸಿಕೊಂಡಿದ್ದರಿಂದ ವಾಹನ ಸಂಚಾರ ಮತ್ತು ಜನಸಂಚಾರದಲ್ಲಿ ಅಡಚಣೆಗಳು ಹೆಚ್ಚಾಗಿದ್ದವು. ಈ ಬಗ್ಗೆ ಸಾರ್ವಜನಿಕರಿಂದ ಅನೇಕ ದೂರುಗಳು ಬಂದ ಹಿನ್ನೆಲೆಯಲ್ಲಿ ನಗರಸಭೆ ಕ್ರಮ ಕೈಗೊಂಡಿತು.
ನಗರದ ಪ್ರಮುಖ ರಸ್ತೆಗಳಾದ ಎಮ್.ಜಿ ರಸ್ತೆ ಮತ್ತು ಪಿಕಳೆ ರಸ್ತೆ ಸೇರಿದಂತೆ ಜನಸಂದಣಿ ಹೆಚ್ಚಿರುವ ಪ್ರದೇಶಗಳಲ್ಲಿ ಅತಿಕ್ರಮಣ ಮಾಡಿದ ಮಳಿಗೆಗಳನ್ನು ತೆರವುಗೊಳಿಸಲಾಯಿತು. ಕಾರ್ಯಾಚರಣೆಯ ವೇಳೆ ರಸ್ತೆ ಮೇಲೆ ಇಟ್ಟಿದ್ದ ಫ್ರಿಜ್‌ಗಳು ಹಾಗೂ ಇತರ ವಸ್ತುಗಳನ್ನು ಜೆಸಿಬಿ ಯಂತ್ರದ ಸಹಾಯದಿಂದ ತೆರವು ಮಾಡಲಾಯಿತು.
ನಗರಸಭೆಯ ಅಧಿಕಾರಿಗಳು, ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ರೀತಿಯಲ್ಲಿ ಅತಿಕ್ರಮಣ ಮಾಡುವುದನ್ನು ತಪ್ಪಿಸಲು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದರು. ಮುಂದಿನ ದಿನಗಳಲ್ಲಿ ಇಂತಹ ಅತಿಕ್ರಮಣ ಕಂಡುಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ
0 ಕಾಮೆಂಟ್‌ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.