ಮಾಹಿತಿಯ ಪ್ರಕಾರ, ಯುವತಿಗೆ ಮದುವೆಯ ಭರವಸೆ ನೀಡಿದ ಬಳಿಕ ಹಲವು ಬಾರಿ ದೌರ್ಜನ್ಯ ಎಸಗಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ನಡುವೆ ಖಾಸಗಿ ವಿಡಿಯೋಗಳನ್ನು ಹೊರಹಾಕುವುದಾಗಿ ಬೆದರಿಕೆ ಹಾಕಿ ಬ್ಲಾಕ್ಮೇಲ್ ಮಾಡಿದ್ದಾನೆ ಎಂಬುದೂ ಆರೋಪವಾಗಿದೆ.
ಯುವತಿ ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲೂ ಮನೆಗೆ ನುಗ್ಗಿ ದೌರ್ಜನ್ಯ ಎಸಗಿದ ಆರೋಪ ಕೂಡ ಕೇಳಿಬಂದಿದೆ. ಘಟನೆ ಬಗ್ಗೆ ಯಾರಿಗಾದರೂ ತಿಳಿಸಿದರೆ ಜೀವಕ್ಕೆ ಅಪಾಯ ಉಂಟುಮಾಡುವುದಾಗಿ ಬೆದರಿಕೆ ಹಾಕಿದ್ದರಿಂದ, ಯುವತಿ ಮೊದಲಿಗೆ ದೂರು ನೀಡಲು ಹಿಂಜರಿದಿದ್ದಾಳೆ ಎಂದು ತಿಳಿದುಬಂದಿದೆ.
ನಂತರ ಧೈರ್ಯ ತಂದುಕೊಂಡ ಯುವತಿ, ಸಂಘಟನೆಯ ಸಹಾಯದಿಂದ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸೂಚನೆ: ಪ್ರಕರಣ ತನಿಖೆಯಲ್ಲಿದ್ದು, ಆರೋಪ ಸಾಬೀತಾಗುವವರೆಗೆ ಆರೋಪಿಯನ್ನು ಅಪರಾಧಿ ಎಂದು ಪರಿಗಣಿಸಲಾಗುವುದಿಲ್ಲ.
0 ಕಾಮೆಂಟ್ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.