ಡಾ. ದಿನೇಶ್ ಭಟ್ಕಳ್ ಅವರು ದೀರ್ಘಕಾಲದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಇತ್ತೀಚಿನ ದಿನಗಳಲ್ಲಿ ಮಾನಸಿಕ ಒತ್ತಡದಲ್ಲಿದ್ದರು ಎಂಬ ಮಾಹಿತಿಯೂ ಹೊರಬಿದ್ದಿದೆ. ಸಾವಿಗೂ ಮುನ್ನ ಅವರು ಕೆಎಲ್‌ಇ ಸಂಸ್ಥೆಯ ಮಾಜಿ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆಗೆ ಸಂದೇಶ ಕಳುಹಿಸಿದ್ದರೆಂದು ವರದಿಯಾಗಿದೆ. ತಮ್ಮ ಕುಟುಂಬದ ಬಗ್ಗೆ ಕಾಳಜಿ ವಹಿಸುವಂತೆ ಮನವಿ ಮಾಡಿದರೆಂದು ತಿಳಿದುಬಂದಿದೆ.
ಘಟನೆ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಡಾ. ದಿನೇಶ್ ಭಟ್ಕಳ್ ಅವರ ಅಗಲಿಕೆಗೆ ಅನೇಕರು ಸಂತಾಪ ಸೂಚಿಸಿದ್ದಾರೆ.
ಈ ಘಟನೆ ಮಾನಸಿಕ ಆರೋಗ್ಯದ ಮಹತ್ವವನ್ನು ಮತ್ತೊಮ್ಮೆ ನೆನಪಿಸುವಂತಾಗಿದೆ. ಸಂಕಷ್ಟದ ಸಂದರ್ಭಗಳಲ್ಲಿ ಆತ್ಮೀಯರು ಹಾಗೂ ತಜ್ಞರ ನೆರವು ಪಡೆಯುವುದು ಅಗತ್ಯವೆಂದು ಸಮಾಜಮುಖಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
0 ಕಾಮೆಂಟ್‌ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.