Ticker

6/recent/ticker-posts
Responsive Advertisement

News: ಬಕ್ರೀದ್ ಹಬ್ಬಕ್ಕೆ ಉತ್ತರ ಪ್ರದೇಶ ಸರ್ಕಾರದ ಹೊಸ ನಿಯಮಗಳು: ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ ಮತ್ತು ರಸ್ತೆ ನಮಾಝ್‌ಗೆ ನಿರ್ಬಂಧ

ಬಕ್ರೀದ್ ಹಬ್ಬದ ಹಿನ್ನೆಲೆ ಉತ್ತರ ಪ್ರದೇಶ ಸರ್ಕಾರ ರಾಜ್ಯದಾದ್ಯಂತ ಭದ್ರತೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡಲು ಹಲವು ಪ್ರಮುಖ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಅ ವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಧಾರ್ಮಿಕ ಆಚರಣೆಗಳು ಕಾನೂನುಬದ್ಧ ಹಾಗೂ ಶಾಂತಿಯುತವಾಗಿ ನಡೆಯಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸರ್ಕಾರದ ನಿರ್ದೇಶನದ ಪ್ರಕಾರ, ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ ನೀಡಲು ಅವಕಾಶ ಇರುವುದಿಲ್ಲ. ಸರ್ಕಾರದಿಂದ ಅನುಮೋದಿತ ಸ್ಥಳಗಳಲ್ಲೇ ಈ ಕಾರ್ಯ ನಡೆಯಬೇಕು ಎಂದು ತಿಳಿಸಲಾಗಿದೆ. ಜೊತೆಗೆ ರಸ್ತೆ ತಡೆದು ನಮಾಝ್ ಸಲ್ಲಿಸುವುದಕ್ಕೂ ಅನುಮತಿ ನೀಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜನಸಾಮಾನ್ಯರಿಗೆ ತೊಂದರೆ ಉಂಟಾಗದಂತೆ ಮಸೀದಿ ಮತ್ತು ಈದ್ಗಾ ಪ್ರದೇಶಗಳಲ್ಲೇ ಪ್ರಾರ್ಥನೆ ನಡೆಸುವಂತೆ ಸರ್ಕಾರ ಮನವಿ ಮಾಡಿದೆ.

ಹಬ್ಬದ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚುವರಿ ಪೊಲೀಸ್ ಭದ್ರತೆ, ಸೂಕ್ಷ್ಮ ಪ್ರದೇಶಗಳಲ್ಲಿ ನಿಗಾವಹಣೆ ಹಾಗೂ ಶಾಂತಿ ಸಭೆಗಳನ್ನು ನಡೆಸಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ಅಕ್ರಮ ಕಸಾಯಿಖಾನೆಗಳ ವಿರುದ್ಧ ಕ್ರಮ ಕೈಗೊಳ್ಳುವುದರ ಜೊತೆಗೆ ಸ್ವಚ್ಛತೆ ಕಾಪಾಡಲು ವಿಶೇಷ ತಂಡಗಳನ್ನು ನಿಯೋಜಿಸಲಾಗುತ್ತಿದೆ.

ಸರ್ಕಾರವು ಈ ಕ್ರಮಗಳು ಯಾವುದೇ ಧರ್ಮದ ವಿರುದ್ಧವಲ್ಲ, ಸಾರ್ವಜನಿಕ ಶಾಂತಿ ಮತ್ತು ವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮಾತ್ರ ಜಾರಿಗೆ ತರಲಾಗುತ್ತಿದೆ ಎಂದು ಸ್ಪಷ್ಟಪಡಿಸಿದೆ. ಹಬ್ಬವನ್ನು ಪರಸ್ಪರ ಗೌರವ ಮತ್ತು ಸೌಹಾರ್ದತೆಯಿಂದ ಆಚರಿಸುವಂತೆ ಜನತೆಗೆ ಮನವಿ ಮಾಡಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು