ಪ್ರತಿ ವರ್ಷ ಈದ್ಗಾ ಮೈದಾನದಲ್ಲಿ ಸಾವಿರಾರು ಮಂದಿ ಸೇರಿ ಬಕ್ರೀದ್ ನಮಾಜ್ ಸಲ್ಲಿಸುವ ಪದ್ಧತಿ ಇತ್ತು. ಆದರೆ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಮುದಾಯದ ಮುಖಂಡರು ಹಾಗೂ ಸ್ಥಳೀಯ ಆಡಳಿತ ಪರಸ್ಪರ ಚರ್ಚಿಸಿ ಈ ಬಾರಿ ಸರಳ ಹಾಗೂ ಶಾಂತಿಯುತ ಆಚರಣೆಗೆ ಒತ್ತು ನೀಡಿದ್ದಾರೆ.
ಇದರ ಜೊತೆಗೆ ಯಾವುದೇ ಮೆರವಣಿಗೆ ಅಥವಾ ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸದಿರಲು ಸಹ ನಿರ್ಧಾರ ಮಾಡಲಾಗಿದೆ ಎಂದು ತಿಳಿದುಬಂದಿದೆ. ಸಾರ್ವಜನಿಕರಲ್ಲಿ ಶಾಂತಿ ಮತ್ತು ಸಹೋದರತ್ವ ಉಳಿಯಬೇಕು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಮುದಾಯದ ಪ್ರಮುಖರು ತಿಳಿಸಿದ್ದಾರೆ.
ಈ ನಡುವೆ ಭಟ್ಕಳದಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ನಿರ್ಬಂಧಗಳನ್ನು ಮುಂದುವರಿಸಲಾಗಿದೆ. ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಕಣ್ಗಾವಲು ವಹಿಸಿದೆ.
0 ಕಾಮೆಂಟ್‌ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.