ಮಾಹಿತಿಯ ಪ್ರಕಾರ, ಬೆಳಗಿನ ಜಾವದ ವೇಳೆ ಬಸ್ ಅನ್ನು ಚಲಾಯಿಸಿಕೊಂಡು ಹೋಗಿದ್ದ ಖದೀಮನು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಂಪೌಂಡ್ ಗೋಡೆ ಹಾಗೂ ಚಹಾ ಅಂಗಡಿಗೆ ಡಿಕ್ಕಿ ಹೊಡೆದಿದ್ದಾನೆ. ಘಟನೆಯ ಪರಿಣಾಮ ಬಸ್‌ಗೆ ಹಾನಿಯಾಗಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ.
ಅಪಘಾತದ ಬಳಿಕ ಬಸ್ ಅನ್ನು ಮತ್ತೊಂದು ಪ್ರದೇಶದಲ್ಲಿ ನಿಲ್ಲಿಸಿ ಆರೋಪಿಯು ಪರಾರಿಯಾಗಿದ್ದಾನೆ. ಬೆಳಿಗ್ಗೆ ಸ್ಥಳೀಯರ ಗಮನಕ್ಕೆ ಬಂದ ನಂತರ ಘಟನೆ ಬಹಿರಂಗಗೊಂಡಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಯ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಡಿಪೋ ಆವರಣದಲ್ಲಿ ಸ್ಥಳಾಭಾವ ಇರುವುದರಿಂದ ಹಲವು ಬಸ್‌ಗಳನ್ನು ರಾತ್ರಿ ವೇಳೆ ಹೊರ ರಸ್ತೆಯಲ್ಲೇ ನಿಲ್ಲಿಸಲಾಗುತ್ತಿತ್ತು ಎಂಬ ಮಾಹಿತಿ ಕೂಡ ಲಭ್ಯವಾಗಿದೆ.
0 ಕಾಮೆಂಟ್‌ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.