ನಿರಂತರ ಮಳೆಯ ಪರಿಣಾಮ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇದ್ದು, ನದಿ ಹಾಗೂ ಹೊಳೆಗಳ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆಯಿದೆ. ಗುಡ್ಡ ಪ್ರದೇಶಗಳಲ್ಲಿ ಭೂಕುಸಿತದ ಆತಂಕವೂ ಇರುವುದರಿಂದ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.
ಅಗತ್ಯವಿಲ್ಲದ ಪ್ರಯಾಣವನ್ನು ಸಾಧ್ಯವಾದಷ್ಟು ತಪ್ಪಿಸುವುದು, ಮಕ್ಕಳನ್ನು ಹಾಗೂ ವೃದ್ಧರನ್ನು ಸುರಕ್ಷಿತ ಸ್ಥಳಗಳಲ್ಲಿ ಇರಿಸುವುದು ಮತ್ತು ಅಧಿಕೃತ ಹವಾಮಾನ ಮಾಹಿತಿ ಹಾಗೂ ಆಡಳಿತದ ಸೂಚನೆಗಳನ್ನು ಪಾಲಿಸುವುದು ಅಗತ್ಯವಾಗಿದೆ. ಕರಾವಳಿ ಭಾಗದ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಸುರಕ್ಷಿತವಾಗಿರಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
0 ಕಾಮೆಂಟ್‌ಗಳು
Don't use abusive language. If any one found to be using abusive language straight away it will be reported to cyber police.
ನಿಂದನೀಯ ಭಾಷೆಯನ್ನು ಬಳಸಬೇಡಿ. ಯಾರಾದರೂ ನಿಂದನೀಯ ಭಾಷೆಯನ್ನು ನೇರವಾಗಿ ಬಳಸುತ್ತಿರುವುದು ಕಂಡುಬಂದರೆ ಅದನ್ನು ಸೈಬರ್ ಪೊಲೀಸರಿಗೆ ವರದಿ ಮಾಡಲಾಗುತ್ತದೆ.